C M Siddaramaiah: ರಾಜ್ಯದಲ್ಲಿ ವಿಪರೀತವಾಗಿ ಬರದ ಸಮಸ್ಯೆಯು ಕಾಡುತ್ತಿದೆ. ಇದೇ ವಿಚಾರವನ್ನು ಇಟ್ಟುಕೊಂಡು ವಿರೋಧಪಕ್ಷ ವಾದ ಬಿಜೆಪಿಯು(BJP) ರಾಜ್ಯ ಸರ್ಕಾರವನ್ನು ವಿವಿಧ ರೀತಿಯಲ್ಲಿ ಮೂದಲಿಸುತ್ತಿದೆ. ಅದ್ರಲ್ಲೂ ಕೂಡ ವಿದ್ಯುತ್ ಲೋಡ್ ಶೆಡ್ಡಿಂಗ್ ಬಗ್ಗೆ ಹಲವಾರು ರೀತಿಗಳಿಂದ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಇದೀಗ ಕೊನೆಗೂ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರು(C M Siddaramaiah) ಮೌನ ಮುರಿದಿದ್ದು ರಾತ್ರೋ ರಾತ್ರಿ ರಾಜ್ಯದ ರೈತರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದಾರೆ.
ಹೌದು, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಕೃಷಿಗೆ ಬೇಕಾದಂತಹ ವಿದ್ಯುತ್ ಪೂರೈಕೆ ಆಗುತ್ತಿದ್ದ. ಲೋಡ್ ಶೆಡ್ಡಿಂಗ್ ಸಮಸ್ಯೆಯಿಂದ ನಾಡಿನ ರೈತರು ರೋಸಿ ಹೋಗಿ, ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಗಿನ್ನು ಪ್ರತಿ ದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವ ಮೂಲಕ ಲೋಡ್ ಶೆಡ್ಡಿಂಗ್ (Load Shedding) ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಎಸ್ಕಾಂಗಳ ಎಂ.ಡಿ.ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಅಂದಹಾಗೆ ರಾಜ್ಯದಲ್ಲಿ ತೀವ್ರ ವಿದ್ಯುತ್ ಬರ ಉಂಟಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಿಎಂ ಅವರು, ಲಭ್ಯವಿರುವ ವಿದ್ಯುತ್ ದಕ್ಷವಾಗಿ ಹಂಚಿಕೆಯಾಗಬೇಕು. ಈ ನಿಟ್ಟಿನಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಹೆಚ್ಚಿನ ನಿಗಾ ವಹಿಸಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಅಲ್ಲದೆ ಪ್ರತಿ ಜಿಲ್ಲೆಗೊಬ್ಬರು ಮುಖ್ಯ ಎಂಜಿನಿಯರ್ಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ, ನಿತ್ಯ ನಿರಂತರ 5 ಗಂಟೆ ವಿದ್ಯುತ್ ಪೂರೈಕೆ ಯಾವುದೇ ಅಡಚಣೆ ಇಲ್ಲದೆ ಆಗುತ್ತಿರುವ ಬಗ್ಗೆ ಖಾತರಿಪಡಿಸಬೇಕು. ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆ ಆಗುತ್ತಿರುವುದನ್ನು ಖಾತರಿಪಡಿಸಿ ವರದಿ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.
1500 ಮೆಗಾ ವ್ಯಾಟ್ ವಿದ್ಯುತ್ ಖರೀದಿಗೆ ಕ್ರಮ:
ನವೆಂಬರ್ನಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ. ಪಂಜಾಬ್ನಿಂದ 600 ಮೆ.ವ್ಯಾ. ವಿದ್ಯುತ್ ಪಡೆಯಲಾಗುವುದು. ಕೆ.ಇ.ಆರ್.ಸಿ.. ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್ ಅಲ್ಪಾವಧಿ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಇದನ್ನೂ ಓದಿ: Mysore: ‘ಒಕ್ಕಲಿಗರು ಸಂಸ್ಕೃತಿ ಇಲ್ಲದ ಪಶುಗಳು’ – ಮಹಿಷ ದಸರಾದಲ್ಲಿ ಕೇಳಿಬಂತು ಶಾಕಿಂಗ್ ಹೇಳಿಕೆ !! ಹೇಳಿದ್ಯಾರು ಗೊತ್ತೇ ?!
