4
ಬೆಳ್ತಂಗಡಿ: ಚಾರ್ಮಾಡಿ ಸುಣ್ಣದ ಗೂಡು ಎಂಬಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕದ ಮಾಜಿ ಅಧ್ಯಕ್ಷ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯ ದಯಾನಂದ ಪೊಂಗರ್ದಡಿ(47) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ನಿರ್ದೇಶಕ, ಬಿಲ್ಲವ ಮುಖಂಡರಾಗಿದ್ದರು. ಇವರು ಹಲವಾರು ಸಂಘ ಸಂಸ್ಥೆ ಗಳಲ್ಲಿ ಸಮಾಜ ಸೇವೆ ಗೈಯ್ಯುತ್ತಿದ್ದು, ತುಂಬಾನೇ ಶ್ರಮಜೀವಿ ಆಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
