Home » ಬೆಳ್ತಂಗಡಿ : ಉಜಿರೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ : ಉಜಿರೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು

0 comments

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಡಿಸೆಂಬರ್ 11ರಂದು ನಡೆದಿದ್ದು, ಇದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ಕಲ್ಮಂಜ ನಿವಾಸಿ ರಾಜೇಶ್ ಎಂದು ತಿಳಿದುಬಂದಿದೆ. ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜೇಶ್ ತಮ್ಮ ದ್ವಿಚಕ್ರ ವಾಹನದಲ್ಲಿ ಕಲ್ಮಂಜದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಉಜಿರೆಯಿಂದ ಕಕ್ಕಿಂಜೆ ಕಡೆಗೆ ಸಂಚರಿಸುತ್ತಿದ್ದ ಲಾರಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಪರಸ್ಪರ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನದ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಆಕ್ಟಿವಾ ಸವಾರ ಕಲ್ಮಂಜ ನಿವಾಸಿ ರಾಜೇಶ್ ಈ ವೇಳೆ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಮೃತರು ತಂದೆ ಬಾಲಪ್ಪ, ತಾಯಿ ವಾರಿಜ, ಓರ್ವ ಸಹೋದರಿ ರಮ್ಯ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

You may also like

Leave a Comment