6
Alwas College: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ಹಾಸ್ಟೆಲ್ನಲ್ಲಿ ಓರ್ವ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಸಂಜಯ್ ಭುವನ್ (16) ಮೃತ ದುರ್ದೈವಿ. ಆತ ತಾನು ವಾಸ ಇರುವ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಎರಡು ದಿನಗಳ ಹಿಂದೆ ಮಾರ್ಚ್ 12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ತಿಳಿದ ನಂತರ NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಕಾಲೇಜಿಗೆ ಮುತ್ತಿಗೆ ಹಾಕಲಾಯಿತು. ಆಗ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಕಾಲೇಜು ಬಳಿ ಭದ್ರತೆ ಒದಗಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಷ್ಪಕ್ಷಪಾತ ತನಿಖೆ ಮಾಡುವಂತೆ ಪೊಲೀಸರಿಗೆ ವಿದ್ಯಾರ್ಥಿ ಸಂಘಟನೆ ಆಗ್ರಹ ಮಾಡಿದೆ.
