Puttur: ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ಹೊಳೆಯೊಂದಕ್ಕೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ (Puttur news).
ಕೆಯ್ಯೂರು ಗ್ರಾಮದ ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲಿಮ್ (17ವ) ಮೃತಪಟ್ಟವರು.
ತಸ್ಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.
ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು. ಅದರೂ, ಮೃತದೇಹ ಪತ್ತೆಯಾಗಿರಲಿಲ್ಲ.
ಸೋಮವಾರ ಬೆಳಿಗ್ಗೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಆಸುಪಾಸಿನಲ್ಲೇ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: Health Tips: ನಿತ್ಯವೂ ಕಾಫಿ ಕುಡುದ್ರೆ ಸಣ್ಣ ಆಗ್ತಾರಾ ?! ಏನ್ ಹೇಳುತ್ತೆ ಸೈನ್ಸ್ ?!
