Home » ಧರ್ಮಸ್ಥಳ: ಕರ್ತವ್ಯ ಮುಗಿಸಿ ಮರಳುತ್ತಿದ್ದ ಪೊಲೀಸ್ ಸಿಬ್ಬಂದಿಗಳಿದ್ದ ಬೈಕಿಗೆ ಕಾರು ಡಿಕ್ಕಿ!! ನೇತ್ರಾವತಿ ಸ್ನಾನಘಟ್ಟದ ಬಳಿ ಘಟನೆ-ಗಾಯಾಳುಗಳು ಆಸ್ಪತ್ರೆಗೆ ದಾಖಲು

ಧರ್ಮಸ್ಥಳ: ಕರ್ತವ್ಯ ಮುಗಿಸಿ ಮರಳುತ್ತಿದ್ದ ಪೊಲೀಸ್ ಸಿಬ್ಬಂದಿಗಳಿದ್ದ ಬೈಕಿಗೆ ಕಾರು ಡಿಕ್ಕಿ!! ನೇತ್ರಾವತಿ ಸ್ನಾನಘಟ್ಟದ ಬಳಿ ಘಟನೆ-ಗಾಯಾಳುಗಳು ಆಸ್ಪತ್ರೆಗೆ ದಾಖಲು

0 comments

ಧರ್ಮಸ್ಥಳ: ಇಲ್ಲಿನ ನೇತ್ರಾವತಿ ಸ್ನಾನಘಟ್ಟದ ಬಳಿ ಕಾರು ಮತ್ತು ಬೈಕು ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಿಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ.

ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕಾರು ನೇತ್ರಾವತಿ ಸ್ನಾನಘಟ್ಟ ತಲುಪುತ್ತಿದ್ದಂತೆ,ಕರ್ತವ್ಯ ಮುಗಿಸಿ ಉಜಿರೆ ಕಡೆಗೆ ತೆರಳುತ್ತಿದ್ದ ಪೊಲೀಸ್ ಸಿಬ್ಬಂದಿಗಳಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಘಟನೆಯಿಂದಾಗಿ ಪೊಲೀಸ್ ಸಿಬ್ಬಂದಿಗಳಾದ ಭೀಮಪ್ಪ ಹಾಗೂ ಧರೇಶ್ ಎಂಬವರು ಗಾಯಗೊಂಡಿದ್ದು,ಕಾರು ಸಮೀಪದ ಚರಂಡಿಗೆ ಬಿದ್ದು ನಜ್ಜುಗುಜ್ಜಾಗಿದೆ.ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

Leave a Comment