4
ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಕರ್ನಾಟದ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಅಲಿಯಾ ಅಸ್ಸಾದಿ, ‘ನಮ್ಮ ಭವಿಷ್ಯವನ್ನು ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋರಿದ್ದಾಳೆ.
ಈ ಕುರಿತು ಟ್ವೀಟ್ ಮೂಲಕ ಹಿಜಾಬ್ಗೆ ಮನವಿ ಮಾಡಿದ ಅಲಿಯಾ, ‘ದ್ವಿತೀಯ ಪಿಯುಸಿ ಪರೀಕ್ಷೆಗಳು ಈ ತಿಂಗಳ 22ರಿಂದ ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆಗಳನ್ನು ಬರೆಯಲು ನಮಗೆ ಅವಕಾಶ ನೀಡುವ ನಿರ್ಧಾರವನ್ನ ನೀವು ತೆಗೆದುಕೊಳ್ಳಬಹುದು. ದಯವಿಟ್ಟು ಇದನ್ನ ಪರಿಗಣಿಸಿ, ನಾವು ಈ ದೇಶದ ಭವಿಷ್ಯ’ ಎಂದಿದ್ದಾರೆ.
