ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ಮನೆಯೊಂದರ ಸಮೀಪದ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ನಡೆದಿದೆ.
ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಇನ್ನಷ್ಟೇ ಆರಂಭಗೊಂಡಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.