Home » ಬೆಳ್ಳಾರೆ: ಮತ್ತೊಮ್ಮೆ ಉದ್ವಿಗ್ನತೆಯತ್ತ ಬೆಳ್ಳಾರೆ !ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ!!

ಬೆಳ್ಳಾರೆ: ಮತ್ತೊಮ್ಮೆ ಉದ್ವಿಗ್ನತೆಯತ್ತ ಬೆಳ್ಳಾರೆ !ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ!!

0 comments

ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ . ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆಪ್ಟೆಂಬರ್ 10 ರಂದು ಬೆಳಿಗ್ಗೆ ಬೆಳ್ಳಾರೆಯಲ್ಲಿ ನಡೆದಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಶಫೀಕ್ ಸಹೋದರ, ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ದಿ. ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ.

ಇಂದು ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿಯೂ, ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ.

ಈ ಬಗೆಗಿನ ಆಡಿಯೋ ರೆಕಾರ್ಡ್ ಪ್ರಶಾಂತ್ ಬಳಿ ಇದೆ ಎನ್ನಲಾಗುತ್ತಿದೆ. ಪ್ರಶಾಂತ್ ಅವರು ದೂರು ನೀಡಲು ಠಾಣೆಗೆ ತೆರಳಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದ್ದಾರೆ. ಸಫ್ರೀದ್ ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ.

ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಇಡೀ ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಷ್ಟ್ರೀಯ ತನಿಖಾ ತಂಡಗಳು ಸ್ಥಳೀಯವಾಗಿ ಬೀಡುಬಿಟ್ಟು ಆರೋಪಿಗಳನ್ನು ಹೆಡೆಮುರಿ ಕಟ್ಟಿದರೂ, ದುಷ್ಕರ್ಮಿ ಮನಸ್ಸುಗಳಿಗೆ ಇನ್ನೂ ಚೂರೂ ಭಯ ಮುಟ್ಟಿಸದೆ ಇದ್ದದ್ದು ಇಂತಹಾ ಘಟನೆಗಳ ಮರುಕಳಿಸಲು ಕಾರಣ ಎನ್ನುವ ಬಗ್ಗೆ ಸಾರ್ವಜನಿಕರಲ್ಲಿ ಅಭಿಪ್ರಾಯ ಮೂಡಿದೆ. ಮತ್ತೆ ಬೆಳ್ಳಾರೆ ಭಯದತ್ತ ಮರಳಿದೆ.

You may also like

Leave a Comment