Home » ಪುತ್ತೂರು : 34 ನೆಕ್ಕಿಲಾಡಿ ಪಿಡಿಓ ಹೃದಯಾಘಾತದಿಂದ ನಿಧನ

ಪುತ್ತೂರು : 34 ನೆಕ್ಕಿಲಾಡಿ ಪಿಡಿಓ ಹೃದಯಾಘಾತದಿಂದ ನಿಧನ

by Praveen Chennavara
0 comments

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಪ್ರಭಾರ ಪಿಡಿಒ ಆಗಿದ್ದ ಕುಮಾರಯ್ಯ (46) ಅವರು ಹೃದಯಾಘಾತದಿಂದ ಸೋಮವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ನಿವಾಸಿಯಾಗಿರುವ ಇವರು ಈ ಹಿಂದೆ ಮಚ್ಚಿನ ಗ್ರಾ.ಪಂ. ನಲ್ಲಿ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆ ಪದೋನ್ನತಿಗೊಂಡು 34 ನೆಕ್ಕಿಲಾಡಿ ಗ್ರಾ.ಪಂ. ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಲ್ಲಿ ಪಿಡಿಒ ಸ್ಥಾನ ಖಾಲಿ ಇದ್ದುದ್ದರಿಂದ ಪ್ರಭಾರ ಪಿಡಿಒ ಆಗಿಯೂ ನಿಯೋಜನೆಗೊಂಡಿದ್ದರು.

ಜ್ವರದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಜೆಯಲ್ಲಿದ್ದ ಅವರಿಗೆ ಭಾನುವಾರ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

You may also like

Leave a Comment