Home » Putturu: ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ ಪ್ರಕರಣ; ಆರೋಪಿ ಪೊಲೀಸ್‌ ವಶಕ್ಕೆ!

Putturu: ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ ಪ್ರಕರಣ; ಆರೋಪಿ ಪೊಲೀಸ್‌ ವಶಕ್ಕೆ!

1 comment
Putturu

Putturu : ಪುತ್ತೂರು(Puttur)ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರಿಗೆ ಮದ್ಯ(Liquor)ಕುಡಿಸಿ ಅತ್ಯಾಚಾರ ಮಾಡಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಈ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ಮೂಲತಃ ಆರ್ಯಾಪು ನಿವಾಸಿ, ಪ್ರಸ್ತುತ ಬನ್ನೂರಿನಲ್ಲಿ ವಾಸವಿರುವ ಸಂಶುದ್ದೀನ್ ಆಸ್ಕರ್ ಆಲಿ (23) ಎಂದು ಗುರುತಿಸಲಾಗಿದೆ. ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಮಹಿಳೆ ನ.24 ರಂದು ರಾತ್ರಿ ಹೊತ್ತಲ್ಲಿ ಪುತ್ತೂರು ಬಸ್‌ ನಿಲ್ದಾಣದಲ್ಲಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಸದರಿ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನವೆಂಬರ್ 28ರಂದು ಆರೋಪಿಯನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿ: Bantwala: ಅಕ್ಕಪಕ್ಕದ ಮನೆಯ ಯುವಕ-ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು!!!

You may also like

Leave a Comment