Rain Alert: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ(Rain Alert). ಅಲ್ಲದೆ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಹಾಗೂ ಉತ್ತರದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಜಿಟಿ ಜಿಟಿ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಮಲೆನಾಡಿನ ಈ ಪ್ರದೇಶಗಳಲ್ಲಿ ವರುಣ ಆರ್ಭಟಿಸಲಿದ್ದಾನೆ.
ಇವತ್ತು, ಜುಲೈ 9 ರಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರೀ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಒಳನಾಡಿನ ಭಾಗವಾದ ಬೆಳಗಾವಿ, ರಾಯಚೂರು, ಧಾರವಾಡ ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಜಿಟಿ ಜಿಟಿ ಮಳೆಯಾಗುವ ಸಾದ್ಯತೆ ಇದೆ.
ಮುಂದಿನ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಿರುಗಾಳಿ ವೇಗವು ಸುಮಾರು 40 – 50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಸಲಾಗಿದೆ. ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗಿದ್ದು ಹೆಚ್ಚು ಮಳೆಯಾಗಿದೆ. ತುಂತುರು ಮಳೆಯ ಕಾರಣ ಹರಿದು ಹೋಗುವ ರನ್ ಆಫ್ ನೀರು ಕಡಿಮೆ ಇದ್ದು, ಹೆಚ್ಚಿನ ನೀರು ಭೂಮಿಗೆ ಇಂಗುತ್ತಿದೆ. ಅತಿ ಹೆಚ್ಚು ಮಳೆ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 15 ಸೆಂ.ಮೀಟರ್, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 13 ಸೆಂ. ಮೀಟರ್, ಗೇರು ಸೊಪ್ಪದಲ್ಲಿ 12. ಸೆಂ. ಮೀಟರ್ ದಾಖಲಾಗಿದೆ.
