Home » Udupi: ರಸ್ತೆ ಅಪಘಾತ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿ ಮೃತ್ಯು!

Udupi: ರಸ್ತೆ ಅಪಘಾತ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿ ಮೃತ್ಯು!

0 comments

Udupi: ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಜನೆ ಹಾಡುಗಾರ ಮತ್ತು ತಬಲ ವಾದಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಭಜನೆ ಹಾಡುಗಾರ ಮೂಡುಬಿದಿರೆ ಆಳ್ವಾಸ್ ಇಂಜಿನಿಯ‌ರ್ ಕಾಲೇಜಿನ ಅಂತಿಮ ಎಂಬಿಎ ವಿದ್ಯಾರ್ಥಿ ಕಿದಿಯೂರಿನ ಸಂಕೀರ್ತನ್ (28) ಎಂದು ತಿಳಿದು ಬಂದಿದೆ.

ಕುಂದಾಪುರದಿಂದ ಮಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿ- 66ರಲ್ಲಿ ಸಾಗುತ್ತಿದ್ದ ಕಾರನ್ನು ಅದರ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ವಾಹನವೊಂದಕ್ಕೆ ಮತ್ತು ಅದರ ಹಿಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

You may also like