Home » ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ| ಭೀಕರ ಅಪಘಾತದಲ್ಲಿ ಮೃತರೆಲ್ಲರೂ ಶಾಲಾ – ಕಾಲೇಜು ವಿದ್ಯಾರ್ಥಿಗಳು !

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ| ಭೀಕರ ಅಪಘಾತದಲ್ಲಿ ಮೃತರೆಲ್ಲರೂ ಶಾಲಾ – ಕಾಲೇಜು ವಿದ್ಯಾರ್ಥಿಗಳು !

0 comments

ಶನಿವಾರ ಬೆಳಗ್ಗೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತ ನಡೆದಿದೆ‌.

ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತರೆಲ್ಲರೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.

ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಶನಿವಾರ ಬೆಳಗ್ಗೆ 9 ಗಂಟೆಯಲ್ಲಿ ಅಪಘಾತಕ್ಕೀಡಾಗಿದೆ. ಈ ಬಸ್ಸಿನಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು.

ಸ್ಥಳದಲ್ಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಮತ್ತಷ್ಟು ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಪಾಲಕರು ಮತ್ತು ಕುಟುಂಬಸ್ಥರ ಗೋಳಾಟ ಮುಗಿಲು ಮುಟ್ಟಿದೆ.

ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

You may also like

Leave a Comment