Home » Bengaluru Accident: ಬೆಂಗಳೂರಲ್ಲಿ ರಸ್ತೆ ಅವಘಡ: ಎರಡು ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!

Bengaluru Accident: ಬೆಂಗಳೂರಲ್ಲಿ ರಸ್ತೆ ಅವಘಡ: ಎರಡು ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!

1 comment
Bengaluru Accident

Bangalore Accident: ಇಂದು ಮುಂಜಾನೆ ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ರಸ್ತೆ ಅಪಘಾತ(Bangalore Accident)ನಡೆದಿದ್ದು, ಈ ಘಟನೆಯಲ್ಲಿ 2 ವರ್ಷದ ಪುಟ್ಟ ಕಂದಮ್ಮ ಸೇರಿ ಇಬ್ಬರು ಮೃತಪಟ್ಟ(Death)ಘಟನೆ ನಡೆದಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದರೆನ್ನಲಾಗಿದೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಇದರಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಈ ಅವಘಡದ ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾರು ಗುದ್ದಿದ್ದ ಪರಿಣಾಮ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡ ನಡೆದ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.ಈ ಪ್ರಕರಣದ ಕುರಿತಂತೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇದನ್ನು ಓದಿ: Crime News: 4 ವರ್ಷಗಳಿಂದ ಇಬ್ಬರೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುತ್ತಿರುವ ಪಾಪಿ ತಂದೆ !! ಹೆಡೆಮುರಿ ಕಟ್ಟಿದ ಪೋಲೀಸರು!

You may also like

Leave a Comment