Home » ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಶೋಭಾ ಕರಂದ್ಲಾಜೆ!

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಶೋಭಾ ಕರಂದ್ಲಾಜೆ!

by Praveen Chennavara
0 comments

ರಾಜ್ಯ ವಿಧಾನಸಭೆಗೆ ಅನ್ನೊಂದು ವರ್ಷ ಬಾಕಿ ಇರುವಾಗಲೇ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಈಗಾಗಲೇ ಆರಂಭಿಸಿದೆ. ಲಿಂಗಾಯಿತರು ಹಾಗೂ ಒಕ್ಕಲಿಗರು ಬಿಜೆಪಿಯ ಪ್ರಮುಖ ಅಸ್ತ್ರವಾಗಿರುವುದರಿಂದ ಈ ಪಂಗಡಕ್ಕೆ ಸೇರಿದ ನಾಯಕರಿಗೆ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಲು ಹೈಕಮಾಂಡ್ ಪ್ಲಾನ್ ರೂಪಿಸಿದೆ ಎನ್ನಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಲಿಂಗಾಯತ ಸಮುದಾಯದವರಾಗಿದ್ದಾರೆ. ಅದೇ ರೀತಿ ಒಕ್ಕಲಿಗ ಸಮುದಾಯಕ್ಕೂ ಪಕ್ಷದಲ್ಲಿ ಅತ್ಯುನ್ನತ ಸ್ಥಾನ ನೀಡಿ ಡಿ.ಕೆ ಶಿವಕುಮಾರ್‌ಗೆ ಟಾಂಗ್ ನೀಡುವುದು ಬಿಜೆಪಿ ಪ್ಲಾನ್ ಆಗಿದೆ. ಆಗಸ್ಟ್ ತಿಂಗಳಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ.

ಈ ಸ್ಥಾನಕ್ಕೆ ಸಧ್ಯಕ್ಕೆ ಬಿಜೆಪಿ ಹೈಕಮಾಂಡ್ ಎದುರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಾ. ಅಶ್ವತ್ಥ ನಾರಾಯಣ ಹಾಗೂ ಸಿ.ಟಿ ರವಿ ಹೆಸರು ಇದೆ ಎನ್ನಲಾಗಿದೆ.

You may also like

Leave a Comment