Home » ಭಾರೀ ಮಳೆಯ ಕಾರಣ | ಇಂದು ಈ ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಕಾರಣ | ಇಂದು ಈ ಶಾಲೆಗಳಿಗೆ ರಜೆ ಘೋಷಣೆ

0 comments

ಬೆಂಗಳೂರು: ಭಾರೀ ಮಳೆಯಿಂದಾಗಿ ( Bengaluru Heavy Rain ) ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (Primary and High School) ಇಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ನಾಳೆ ಬೆಂಗಳೂರು ಪೂರ್ವ ತಾಲೂಕಿನ ಕೆ ಆರ್ ಪುರಂ ದಕ್ಷಿಣ ವಲಯ 4ಕ್ಕೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ದಿನಾಂಕ 07-09-2022ರಂದು ರಜೆಯನ್ನು ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಎರಡು ಶನಿವಾರಗಳಂದು ಪೂರ್ಣ ದಿನ ಕಾರ್ಯನಿರ್ವಹಿಸುವ ಮೂಲಕ ಸರಿದೂಗಿಸುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ದಕ್ಷಿಣ ವಲಯ-4ರ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಭಾರೀ, ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತಗೊಂಡಿರುವುದರಿಂದ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್ ಪುರಂ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ 07-09-2022ರಂದು ರಜೆ ಘೋಷಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದಿದ್ದಾರೆ.

You may also like

Leave a Comment