Home » ಬೆಳ್ಳಂಬೆಳಗ್ಗೆ ನಡೆದ ದುರಂತ: ಹಬ್ಬ ಮುಗಿಸಿ ವಾಪಸ್ ಬರುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

ಬೆಳ್ಳಂಬೆಳಗ್ಗೆ ನಡೆದ ದುರಂತ: ಹಬ್ಬ ಮುಗಿಸಿ ವಾಪಸ್ ಬರುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

0 comments

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆಯೊಂದು ಇಂದು ಬೆಳಂಬೆಳಗ್ಗೆ ನಡೆದಿದೆ. ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು.

ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ( ಸೋಮವಾರ) ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ.

ಐವರು ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಆಗಿತ್ತು.

ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡ ವ್ಯಕ್ತಿಗಳು. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment