12
Kodagu: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಮಳೆಯ ಅಬ್ಬರವಂತೂ ದಿನೇ ದಿನೇ ಹೆಚ್ಚುತ್ತಿದೆ. ನಿರಂತರ ಧಾರಾಕಾರ ಮಳೆಗೆ ಹಲವು ಪ್ರದೇಶಗಳಿಗೆ ಪ್ರವಾಹದ ಹೊಡೆತ ತಟ್ಟಿದೆ. ಹಲವೆಡೆ ಅವಾಂತರಗಳು ಸಂಭವಿಸಿದೆ. ಅದರಲ್ಲೂ ಕೊಡಗಿನಲ್ಲಿ ವರುಣಾರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನ ಈ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜುಲೈ, 27) ರಜೆ ಘೋಷಿಸಲಾಗಿದೆ.
ಹೌದು, ಜು. 27ರಂದು ಕೊಡಗು(Kodagu) ಜಿಲ್ಲೆಯ ಸೋಮವಾರಪೇಟೆ(Somavara Pete) ಮತ್ತು ಕುಶಾಲನಗರ(Kushalnagara) ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
