Home » SSLC ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ;ಸಾವಿಗೆ ಕಾರಣ ನಿಗೂಢ!

SSLC ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ;ಸಾವಿಗೆ ಕಾರಣ ನಿಗೂಢ!

0 comments

ಕುಂದಾಪುರ: ವಿದ್ಯಾರ್ಥಿನಿಯೋರ್ವಳು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರದ ಕುಂಭಾಶಿಯ ಕೊರವಡಿ ಎಂಬಲ್ಲಿ ನಡೆದಿದೆ.

ಅನನ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಈಕೆ, ಮಣೂರು ಪಡುಕೆರೆ ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದು, ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆದರೆ, ಈಕೆಯ ಈ ನಿರ್ಧಾರದ ಹಿಂದಿರುವ ನಿಗೂಢ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

You may also like

Leave a Comment