Crop insurance: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಮಳೆಯ ಅಬ್ಬರ ಜೋರಾಗಿಯೇ ಇದೆ. ಈ ಮಧ್ಯೆ ಕೃಷಿ ಇಲಾಖೆಯು ರೈತರಿಗೆ ಮಹತ್ವದ ಮಾಹಿತಿ ನೀಡಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ (Crop insurance) ಪಡೆಯಲು ರೈತರಿಗೆ ಕೃಷಿ ಇಲಾಖೆ ಸಲಹೆಯನ್ನು ನೀಡಿದೆ.
ಕರ್ನಾಟಕ ಸರ್ಕಾರ 2023ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಧಾರವಾಡದ 8 ತಾಲ್ಲೂಕಿನ ಎಲ್ಲಾ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ರೈತರು ಈ ಬಗ್ಗೆ ಬೆಳೆ ವಿಮೆ ಪಡೆಯುವಂತೆ ಧಾರವಾಡದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.
ಬೆಳೆಸಾಲ ಪಡೆಯುವ ಹಾಗೂ ಪಡೆಯದ ರೈತರಿಗೆ, ಇತರೆ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಮತ್ತು ಕೆಂಪು ಮೆಣಸಿನಕಾಯಿ (ನೀರಾವರಿ ಹಾಗೂ ಮಳೆ ಆಶ್ರಿತ) ಬೆಳೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿದೆ.
ಹೊಸ ಪ್ರದೇಶ ವಿಸ್ತರಣೆಯಡಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2023-24ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಹಾಯಧನ ವಿತರಿಸಲಾಗುತ್ತಿದೆ.
ಗುಲಾಬಿ, ಕರಿಬೇವು, ಮಲ್ಲಿಗೆ, ಪಪ್ಪಾಯಿ, ನುಗ್ಗೆ, ತೆಂಗು, ಅಡಿಕೆ, ಸಪೋಟ, ಗೇರು, ಮಾವು, ದಾಳಿಂಬೆ, ಪೇರಲ, ಬಾಳೆ, ಮತ್ತು ಇನ್ನಿತರೆ ತೋಟಗಾರಿಕೆ ಬೆಳೆಗಳನ್ನು ಅಭಿವೃದ್ದಿಪಡಿಸಲು, ಸಾಂಬಾರು ಮತ್ತು ಅಪ್ರಧಾನ ಹಣ್ಣುಗಳನ್ನು ಗುಚ್ಚ ಮಾದರಿಯಲ್ಲಿ ಅಭಿವೃದ್ದಿಪಡಿಸಲು ಹಾಗೂ ಹನಿನೀರಾವರಿ ಒಗ್ಗೂಡಿಸುವಿಕೆಗೆ ಸಹಾಯಧನ ಸೌಲಭ್ಯಗಳಿವೆ ಎಂದು ಮಾಹಿತಿ ನೀಡಲಾಗಿದೆ.
ರೈತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು.
ನೆಲಗಡಲೆ (ಶೇಂಗಾ) (ಮ.ಆ.), ನೆಲಗಡಲೆ (ಶೇಂಗಾ) (ನೀ.), ಹತ್ತಿ (ಮ.ಆ.), ಹತ್ತಿ (ನೀ.), ಈರುಳ್ಳಿ (ಮ.ಆ.), ಈರುಳ್ಳಿ (ನೀ.), ಆಲೂಗಡ್ಡೆ (ನೀ.), ಆಲೂಗಡ್ಡೆ (ಮ.ಆ.),ಭತ್ತ (ನೀ.), ಭತ್ತ (ಮ.ಆ.), ಮುಸುಕಿನ ಜೋಳ (ನೀ.), ಮುಸುಕಿನ ಜೋಳ (ಮ.ಆ.), ಜೋಳ (ಮ.ಆ.), ಸಾವೆ (ಮ.ಆ), ಉದ್ದು (ಮ.ಆ.), ತೊಗರಿ (ಮ.ಆ.), ಹೆಸರು (ಮ.ಆ.), ಸೋಯಾಅವರೆ (ಮ.ಆ.), ಟೊಮ್ಯಾಟೊ, ಕೆಂಪು ಮೆಣಸಿನಕಾಯಿ (ಮ.ಆ.) ಮತ್ತು ಕೆಂಪು ಮೆಣಸಿನಕಾಯಿ (ನೀ.) ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಹೋಬಳಿ ಮಟ್ಟದ ಒಟ್ಟು 14 ಬೆಳೆಗಳನ್ನು ಪಟ್ಟಿ ಮಾಡಲಾಗಿದೆ.
ಹುಬ್ಬಳ್ಳಿ ನಗರ ತಾಲ್ಲೂಕುಗಳಿಗೆ ನೆಲಗಡಲೆ (ಶೇಂಗಾ) (ಮಳೆ ಆಶ್ರಿತ) ಕುಂದಗೋಳ ತಾಲ್ಲೂಕು ನೆಲಗಡಲೆ (ಶೇಂಗಾ) (ಮಳೆ ಆಶ್ರಿತ) ಮತ್ತು ಹತ್ತಿ (ಮಳೆ ಆಶ್ರಿತ) ನವಲಗುಂದ ಮತ್ತು ಅಣ್ಣಿಗೇರಿ ತಾಲೂಕು ಮುಸುಕಿನಜೋಳ (ಮಳೆಆಶ್ರಿತ), ಧಾರವಾಡ ಮತ್ತು ಅಳ್ನಾವರ ತಾಲ್ಲೂಕುಗಳಲ್ಲಿ ಭತ್ತ (ಮಳೆ ಆಶ್ರಿತ), ಕಲಘಟಗಿ ತಾಲ್ಲೂಕು ಭತ್ತ (ಮಳೆ ಆಶ್ರಿತ), ಮುಸುಕಿನಜೋಳ (ಮಳೆ ಆಶ್ರಿತ) ಹುಬ್ಬಳ್ಳಿ, ಹೆಸರು (ಮಳೆ ಆಶ್ರಿತ) ಇವು ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾಗಿವೆ.
ರೈತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಎಸ್‍ಬಿಐ ಜನರಲ್ ಇನ್‍ಶ್ಯೂರೆನ್ಸ್ ಕಂಪನಿ, 2ನೇ ಮಹಡಿ, ಕಲಬುರಗಿ ಹಾಲ್ ಮಾರ್ಕ್, ಪಿಂಟೋ ರೋಡ್, ದೇಸಾಯಿ ಕ್ರಾಸ್ ದೇಶಪಾಂಡೆ ನಗರ, ಹುಬ್ಬಳ್ಳಿ, ಸ್ಥಳೀಯ ತೋಟಗಾರಿಕೆ ಇಲಾಖೆ,
ಕಂದಾಯ, ಗ್ರಾಮೀಣ ಅಭಿವೃದ್ಧಿ, ಕೃಷಿ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್, ಸೇವಾ ಬ್ಯಾಂಕುಗಳ ಸಿಬ್ಬಂದಿ.
