2
Putturu : ಮಸೀದಿಯಿಂದ ಇಬ್ಬರು ವ್ಯಕ್ತಿಗಳು ಮನೆಗೆ ಬರುತ್ತಿರುವ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಹೌದು, ಒಳಮೊಗ್ರು ಗ್ರಾಮದ ಮೈದಾನಿಮೂಲೆ ಮಸೀದಿಯಿಂದ ಮನೆಗೆ ಮರಳುತ್ತಿದ್ದ ವೇಳೆ ಕುಟಿನೋಪಿನಡ್ಕದಲ್ಲಿ ತಂಡವೊಂದು ಇಬ್ಬರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪದಡಿ ನ್ಯಾಯಾಲಯದ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಒಳಮೊಗ್ರು ಗ್ರಾಮದ ಇಡಿಂಜಿಲ ನಿವಾಸಿ ರಶೀದ್ ದೂರು ನೀಡಿದ್ದು ಇಬ್ರಾಹಿಂ ಬಾಳೆಯ, ಜಮಾಲುದ್ದೀನ್,ಆಬ್ದುಲ್ ರಹಿಮಾನ್, ಆಸ್ಕರ್, ಅನ್ಸಾರ್, ಮುನೀರ್ ವಿರುದ್ಧ ಪ್ರಕರಣ ದಾಖಲಾಗಿದೆ. ರಶೀದಿ ಮತ್ತು ಇರ್ಷಾದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
