Home » ಬಿ.ಸಿ.ರೋಡ್ : ನಾಪತ್ತೆಯಾದ ಟೈಲರ್ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ

ಬಿ.ಸಿ.ರೋಡ್ : ನಾಪತ್ತೆಯಾದ ಟೈಲರ್ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ

by Praveen Chennavara
0 comments

ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ ( 62) ಮೃತಪಟ್ಟ ವ್ಯಕ್ತಿ.

ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದು, ಇತ್ತೀಚೆಗೆ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ನ.25 ರಂದು ಬೆಳಿಗ್ಗೆ ಮನೆಯಿಂದ ಹೊರಟ ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದರು ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಶುಕ್ರವಾರ ನೇತ್ರಾವತಿ ನದಿಯಲ್ಲಿ ಶವ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.

You may also like

Leave a Comment