Home » ಪರಂಗಿಪೇಟೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಸಾವು

ಪರಂಗಿಪೇಟೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಸಾವು

by Praveen Chennavara
0 comments

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಪರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ ಪುತ್ರ ಪ್ರಜ್ವಲ್(26) ಮೃತ ಬೈಕ್ ಸವಾರ.

ಮಂಗಳೂರಿನ ಎನ್‌ಎಂಪಿಟಿಯಲ್ಲಿ ಉದ್ಯೋಗಿಯಾಗಿದ್ದ ಪ್ರಜ್ವಲ್ ಕೆಲಸದ ನಿಮಿತ್ತ ಕ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಪ್ರಜ್ವಲ್ ನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You may also like

Leave a Comment