Home » Belthangady: ಬೈಕ್ ಪಿಕಪ್‌ ಅಪಘಾತ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

Belthangady: ಬೈಕ್ ಪಿಕಪ್‌ ಅಪಘಾತ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

1 comment
Belthangady

Belthangady: ದ್ವಿಚಕ್ರ ವಾಹನ ಹಾಗೂ ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್‌ ಕೆಲಸ ಮಾಡುತ್ತಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಹಳೇಕೋಟೆ ಬಳಿ ಮಾ.25ರ ಮಧ್ಯಾಹ್ನ ನಡೆದಿದೆ. ಸಹ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಪುರುಷೋತ್ತಮ (19) ಎಂಬಾತನೇ ಸಾವಿಗೀಡಾದ ಯುವಕ. ಇನ್ನೋರ್ವ ಯುವಕ ತೌಫೀಕ್‌ (17) ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ. ತೌಫೀಕ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಪುತ್ತೂರು: ನದಿಯಲ್ಲಿ ಮುಳುಗಿ ಯುವಕ ಮೃತ್ಯು

ದ್ವಿಚಕ್ರ ವಾಹನ ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತ್ತಿದ್ದು, ಎದುರಿನಿಂದ ಬರುತ್ತಿದ್ದ ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದಿದ್ದು, ಕ್ರಮ ಕೈಗೊಂಡಿದ್ದಾರೆ.

You may also like

Leave a Comment