ಬೆಳ್ತಂಗಡಿ : ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾ ಡಿ (44) ಸಹಿತ ಇಬ್ಬರು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರು ಚಾಲಕ, ಉಳಾಯಿಬೆಟ್ಟು, ನಿವಾಸಿ ಮುಷರಫ್ ಎಂಬವರು ಕೂಡಾ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಹಾಗೂ ಬಸ್ಸು ಮುಖಾಮುಖಿ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ನೌಶಾದ್ ಹಾಜಿ ಸೂರಲ್ಪಾಡಿ ಅವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅಪಘಾತಕ್ಕೆ ಬಲಿಯಾದ ಕಾರು ಚಾಲಕ ಮುಷರಫ್ ಉಳಾಯಿಬೆಟ್ಟು, ನಿವಾಸಿ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
