Home » ಬೆಳ್ತಂಗಡಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭವತಿಯನ್ನಾಗಿಸಿದ ಅತ್ತೆ ಮಗ !! | ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

ಬೆಳ್ತಂಗಡಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭವತಿಯನ್ನಾಗಿಸಿದ ಅತ್ತೆ ಮಗ !! | ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

0 comments

ಅತ್ತೆ ಮಗನೇ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕಾರಣ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.

ಆರೋಪಿ ಕುವೆಟ್ಟು ಗ್ರಾಮದ ಸಬರಬೈಲಿನ ನಿವಾಸಿ ರಾಜೇಶ್ ಎಂದು ತಿಳಿದುಬಂದಿದೆ.

ಬಾಲಕಿಯು ಕಳೆದ ವರ್ಷ ತನ್ನ ತಂದೆಯ ಅಕ್ಕನ ಮನೆಯಾದ ಸಬರಬೈಲು ಎಂಬಲ್ಲಿಗೆ ಹೋಗಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸುಮಾರು ರಾತ್ರಿ 8 ಗಂಟೆಯ ವೇಳೆಗೆ ಅತ್ತೆಯ ಮಗನಾದ ರಾಜೇಶ್ ಎಂಬಾತ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಅಲ್ಲದೇ ಇನ್ನೊಂದು ಬಾರಿ ಆರೋಪಿಯ ಮನೆಗೆ ಹೋಗಿದ್ದ ವೇಳೆಯೂ ಇದೇ ರೀತಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾಳೆ.

ಇತ್ತೀಚೆಗೆ ಸಂತ್ರಸ್ತೆ ತನ್ನ ಮನೆಯಲ್ಲಿ ನಿತ್ರಾಣಗೊಂಡು ಮಲಗಿದ್ದಾಗ ಆಕೆಯ ಹೊಟ್ಟೆಯ ಗಾತ್ರದಲ್ಲಾದ ವ್ಯತ್ಯಾಸವನ್ನು ಗಮನಿಸಿ ಹೆತ್ತವರು ವಿಚಾರಿಸಿದಾಗ ಆಕೆ ನಿಜಾಂಶವನ್ನು ತಿಳಿಸಿದ್ದಾಳೆ. ಬಳಿಕ ಪೋಷಕರು ಬೆಳ್ತಂಗಡಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಕ್ಸೋ ಕಾಯ್ದೆಯಡಿ ಬೆಳ್ತಂಗಡಿ ಪೊಲೀಸರು ಆರೋಪಿ ರಾಜೇಶನನ್ನು ವಶಕ್ಕೆ ಪಡೆದಿದ್ದಾರೆ.

You may also like

Leave a Comment