Home » ಬೆಳ್ತಂಗಡಿ: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

0 comments

ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲೇ ಕಳ್ಳರ ತಂಡವೊಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆಯ ಲಾಕರ್ ಒಡೆದು ನಗದು ಹಾಗೂ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಕೃಷಿ ಜೊತೆ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದ ದೇರಾಜೆ ಮನೆಯ ನಿವಾಸಿ ಮಹಮ್ಮದ್ (43) ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮಹಮ್ಮದ್ ಅವರು ಭಾನುವಾರ ಅವರ ಪತ್ನಿ ಮತ್ತು ಮೂವರು ಮಕ್ಕಳು ಸಹಿತ ನಿಶ್ಚಿತಾರ್ಥ ಕಾರ್ಯಕ್ರಮವೊಂದಕ್ಕೆ ಬಂಟ್ವಾಳ ತಾಲ್ಲೂಕಿನ ಉಳಿ ಗ್ರಾಮಕ್ಕೆ ಹೋಗಿದ್ದರು.

ನಿಶ್ಚಿತಾರ್ಥ ಮುಗಿಸಿಕೊಂಡು ಸಂಜೆ ಮನೆಗೆ ಬಂದು ನೋಡಿದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. 5,200ರೂ ನಗದು, ಚೈನ್, ಚಿನ್ನದ ಬಿಸ್ಕೆಟ್, ಬಳೆ, ಮಕ್ಕಳ ಅಭರಣ ಸಹಿತ ಒಟ್ಟಾರೆ 12,05,200 ರೂ. ಮೌಲ್ಯದ 40 ಪವನ್ ಚಿನ್ನಾಭರಣ ಕಳವಾಗಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment