ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಲೇ ಇದ್ದು, ಹಲವು ಕಡೆ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ. ಹಾಗಾಗಿ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಸಲಿದ್ದಾರೆ.
ಈ ಕುರಿತಾಗಿ ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಡಗು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲಾ ಪ್ರವಾಸ ನಡೆಸಲಾಗುವುದು ಎಂದು ತಿಳಿಸಿದರು. ಮಳೆ ಹಾನಿಯ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ. ಮಂಗಳವಾರ ಹಾಗೂ ಬುಧವಾರ ಮಳೆ ಹಾನಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
“ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇನೆ. ಕೊಡಗು, ದಕ್ಷಿಣ ಕನ್ನಡ, ಕಾರವಾರ ಹಾಗೂ ಉಡುಪಿ ಜಿಲ್ಲೆಗಳಿಗೆ ತೆರಳಿ ಮಳೆ ಹಾನಿ ಪರಿಶೀಲನೆ ನಡೆಸಿ,
ಮಂಗಳವಾರ ಕೊಡಗು ಪ್ರವಾಸ ಕೈಗೊಂಡು ಮಳೆ ಹಾನಿ ಹಾಗೂ ಭೂ ಕುಸಿತ ಪರಿಶೀಲನೆ ನಡೆಸಲಾಗುವುದು. ಅಧಿಕಾರಿಗಳ ಜೊತೆಗೂ ಸಭೆ ನಡೆಸಲಾಗುವುದು ಅಲ್ಲದೆ ಸಂತ್ರಸ್ತದ ಜೊತೆಗೂ ಮಾತನಾಡಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದರು.
ಮಂಗಳವಾರ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿ, ಬುಧವಾರ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ನಂತರ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುತ್ತೇನೆ” ಎಂದು ಸಿ ಎಂ ತಿಳಿಸಿದ್ದಾರೆ.

