4
Kundapura: 13 ವರ್ಷದ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಟ್ಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಏಳನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಮನೆಗೆ ಬಂದವಳೇ ಮನೆಯ ಸಮೀಪದ ಬಾವಿಗೆ ಹಾರಿದ್ದ, ತಕ್ಷಣ ಮನೆಯವರು ಅಗ್ನಿಶಾಮಕ ದಳದವರನ್ನು ಕರೆಯಿಸಿ ಆಕೆಯನ್ನು ಮೇಲಕ್ಕೆತ್ತಿದರೂ, ಆಕೆ ಅದಾಗಲೇ ಮೃತ ಹೊಂದಿದ್ದಳು ಎಂದು ವರದಿಯಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾನಸಿಕ ಖಿನ್ನತೆಯಿಂದ ಈಕೆ ಬಳಲುತ್ತಿದ್ದಳು ಎನ್ನಲಾಗಿದೆ. ಮೃತ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಲಾಗುತ್ತಿತ್ತು ಎನ್ನಲಾಗಿದೆ.
