Home » ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರನಿಗೆ ಎದುರಾಯ್ತು ಮತ್ತೊಂದು ಸಂಕಷ್ಟ!

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರನಿಗೆ ಎದುರಾಯ್ತು ಮತ್ತೊಂದು ಸಂಕಷ್ಟ!

0 comments
Mahesh Shetty thimarodi

ಬೆಳ್ತಂಗಡಿ: ಸೌಜನ್ಯ ಪರ ಮುಂಚೂಣಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty thimarodi) ಅವರನ್ನು ಬಂಧಿಸಲು ಪೊಲೀಸ್ ಇಲಾಖೆಗೆ ನ್ಯಾಯಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ.

ಖಾಸಗಿ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ವಾಪಾಸಾಗುತ್ತಿದ್ದ ಭಾಸ್ಕರ್ ನಾಯ್ಕ ಮೇಲೆ ತಂಡವೊಂದು ಹಲ್ಲೆ ನಡೆಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗಿದ್ದರೂ ಇದುವರೆಗೂ ಆರೋಪಿಗಳನ್ನು ಬಂಧಿಸದೆ ಇರುವುದರಿಂದ ಭಾಸ್ಕರ್ ನಾಯ್ಕ ಅವರು ಹೈಕೋರ್ಟ್‌ನ ಮೋರೆ ಹೋಗಿದ್ದರು.

ಅದರಂತೆ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಆರೋಪಿತರನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದೆ ಎನ್ನುವ ವರದಿಯಾಗಿದೆ. ಅದರಂತೆ ಮೂರು ದಿನದ ಒಳಗೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ತಂಡದವರವನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ಆದೇಶ ಹೊರಡಿಸಿದೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ: Diesel Cars: ಡೀಸೆಲ್‌ ಕಾರುಗಳ ಮೇಲೆ ಮಾಲಿನ್ಯ ತೆರಿಗೆ ವಿಧಿಸಲು ಸಿದ್ಧತೆ ಮಾಡಿಕೊಂಡ ನಿತಿನ್‌ ಗಡ್ಕರಿ!!! ಎಷ್ಟು ಗೊತ್ತೇ?

You may also like

Leave a Comment