Home » Bantwala ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ -ಕಾರು ಸಹಿತ ಚಾಲಕ ಪರಾರಿ

Bantwala ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ -ಕಾರು ಸಹಿತ ಚಾಲಕ ಪರಾರಿ

0 comments

Bantwala: ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆಯೊಂದು ನಡೆದಿದೆ.

ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ಈ ಘಟನೆ ನಡೆದಿದೆ. ಶಾಸಕ ರಾಜೇಶ್‌ ನಾಯ್ಕ್‌ ಅವರು ಇಂದು ಸಂಕ್ರಮಣದ ನಿಮಿತ್ತ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವ ಸಮಯದಲ್ಲಿ ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ವಾಪಾಸು ಬರುತ್ತಿದ್ದಾಗ ಘಟನೆ ನಡೆದಿದೆ.

ಸ್ವಿಫ್ಟ್‌ ಕಾರೊಂದು ಮೂಡಬಿದಿರೆ ಕಡೆಯಿಂದ ಬರುತ್ತಿದ್ದು, ಸೀದಾ ಶಾಸಕರಿಗೆ ಡಿಕ್ಕಿಯಾಗಿದ್ದು, ಕಾರು ಗುದ್ದಿದ ರಭಸಕ್ಕೆ ಶಾಸಕ ರಾಜೇಶ್‌ ನಾಯ್ಕ್‌ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ.

ಚಿಕಿತ್ಸೆ ಪಡೆದು ಅವರು ಮನೆಗೆ ವಾಪಾಸಾಗಿದ್ದಾರೆ.

ಪರಾರಿಯಾಗಿ ಕಾರನ್ನು ಗುರುಪುರದಲ್ಲಿ ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You may also like

Leave a Comment