0
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ತುಳು ನಾಡ ಐಸಿರಿ ಕಾರ್ಯಕ್ರಮ ವಿವಾದಕ್ಕೆ ತುತ್ತಾಗಿದೆ.
ಕಾರ್ಯಕ್ರಮದಲ್ಲಿ ತುಳು ಸಂಸ್ಕೃತಿಯ ಬಗ್ಗೆ, ಯಕ್ಷಗಾನ ಕಲೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಕಾಲೇಜಿನ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
