Home » ಬೆಳ್ತಂಗಡಿ : ದಲಿತ ವ್ಯಕ್ತಿಯ ಹತ್ಯೆ ಪ್ರಕರಣ | ಇಂದು ಮೃತ ದಿನೇಶ್ ಮನೆಗೆ ಸಿದ್ದರಾಮಯ್ಯ ಭೇಟಿ ಸಾಧ್ಯತೆ

ಬೆಳ್ತಂಗಡಿ : ದಲಿತ ವ್ಯಕ್ತಿಯ ಹತ್ಯೆ ಪ್ರಕರಣ | ಇಂದು ಮೃತ ದಿನೇಶ್ ಮನೆಗೆ ಸಿದ್ದರಾಮಯ್ಯ ಭೇಟಿ ಸಾಧ್ಯತೆ

0 comments

ಬೆಳ್ತಂಗಡಿ : ಇಂದು ಮಂಗಳೂರು ಪ್ರವಾಸದಲ್ಲಿದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿ ಮುಖಂಡನಿಂದ ಕೊಲೆಯಾದ ದಿನೇಶ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ.

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ಘಟನೆ ಬಗ್ಗೆ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದರು.

ಧರ್ಮಸ್ಥಳದಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಹತ್ಯೆಗೈದ ಬಜರಂಗದಳ ಮುಖಂಡನನ್ನು ಬಿಜೆಪಿ ರಕ್ಷಿಸುತ್ತದೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ನವರು ಆರೋಪಿಸಿದ್ದರು. ಈ ಕುರಿತು ಟ್ವೀಟ್ ಮಾಡಿರು ಅವರು, ” ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಬಜರಂಗದಳದ ನಾಯಕನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿಯದೆ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

You may also like

Leave a Comment