2
Puttur: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಯನ್ನು ನೀಡಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ 2000 ಅಕೌಂಟಿಗೆ ಬರುತ್ತಿದೆ ಇದೇ ಯೋಜನೆ ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ 4000 ಆದರೂ ಆಗಬಹುದು ಎಂದು ಶಾಸಕ ಅಶೋಕ್ ರೈ ಹೇಳಿದರು.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾರಣ ಜನ ಇಂದು ನೆಮ್ಮದಿಯಿಂದ ಇದ್ದಾರೆ.ಇದು ಮುಂದುವರೆಯಬೇಕಾದರೆ ಜೀವನ ಮುಂದೆಯೂ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಸರಕಾರ ಮಾತ್ರ ಬಡವರ ಪರ ಕೆಲಸ ಮಾಡುತ್ತದೆ ಇದನ್ನು ಜನ ತಿಳಿದುಕೊಳ್ಳಬೇಕು ಎಂದು ಹೇಳಿದರು.
