ಬೇಸಿಗೆ ರಜೆಯ ಬಳಿಕ ರಾಜ್ಯಾದ್ಯಂತ ಇಂದು ಶಾಲಾ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಬಹು ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕುತ್ತಿರುವುದು ಕಂಡು ಬಂತು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಶ್ರೀ ಭಾರತಿ ಉನ್ನತ ಪ್ರಾಥಮಿಕ ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ತಿಲಕವಿಟ್ಟು ವಿಶೇಷವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಪ್ರಮುಖರು, ಶಾಲಾ ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.