Home » ದಕ್ಷಿಣ ಕನ್ನಡ : ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು

ದಕ್ಷಿಣ ಕನ್ನಡ : ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು

by Praveen Chennavara
0 comments
Kadaba death

Kadaba death : ಕಡಬ :ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತಪಟ್ಟ ಘಟನೆ ಕಡಬ (kadaba death) ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಶ್ರೀಮತಿ ಗೀತಾ ಎಂಬವರು ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ ಹೊಕ್ಕು ಮೃತಪಟ್ಟವರು.

ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಸುಮಾರು ಬೆಳಿಗ್ಗೆ 7 ಗಂಟೆ ಹೊತ್ತಿಗೆ ಮನೆಗೆ ಹಿಂತಿರುಗುವಾಗ ಎಡವಿ ಬಿದ್ದರೆನ್ನಲಾಗಿದೆ. ಬೀಳುವಾಗ ಹರಿತವಾದ ಕತ್ತಿ ಎದೆಯೊಳಗೆ ಹೊಕ್ಕು ಮೃತಪಟ್ಟಿರುವುದಾಗಿ ಮೃತರ ಪತಿ ಪೊಲೀಸ್ ದೂರು ನೀಡಿದ್ದು, ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

You may also like

Leave a Comment