Home » Mangaluru : ಕೆರೆಗೆ ಬಿದ್ದು ಕಂಬಳ ಯಜಮಾನ ಸುಧಾಕರ್ ಆಳ್ವ ಸಾವು!!

Mangaluru : ಕೆರೆಗೆ ಬಿದ್ದು ಕಂಬಳ ಯಜಮಾನ ಸುಧಾಕರ್ ಆಳ್ವ ಸಾವು!!

0 comments

Mangaluru : ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸುಧಾಕರ ಆಳ್ವ(Sudhakara Alva)ಅವರು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ನಾಪತ್ತೆಯಾಗಿದ್ದು ಮನೆ ಮಂದಿ ಹಾಗೂ ಸ್ಥಳೀಯರು ಸುತ್ತ ಮುತ್ತ ಹುಡುಕಾಟ ನಡೆಸಿದ್ದು ಮನೆಯ ಪಕ್ಕದ ಕೆರೆಯ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪಂಪ್ ಸ್ವಿಚ್ ಹಾಕಲು ಬಂದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಬೇಕರಿ ತಿಂಡಿ-ತಿನಿಸುಗಳ ತಯಾರಕರಾಗಿ, ಯುವ ಉದ್ಯಮಿಯಾಗಿ ಜನಾನುರಾಗಿಯಾಗಿದ್ದ ಸುಧಾಕರ ಆಳ್ವರು ಮಂಗಳವಾರ ತೋಟಕ್ಕೆ ನೀರು ಹಾಯಿಸಲು ಹಾಕಿದ್ದ ಮೋಟಾರ್‌ ಪಂಪ್‌ ಅನ್ನು ಬಂದ್‌ ಮಾಡಲು ಕೆರೆ ಬಳಿ ತೆರಳಿದ್ದರು. ಮನೆಮಂದಿ ಚಹಾ ಕುಡಿಯಲು ಅವರನ್ನು ಕರೆಯಲು ಕೆರೆ ಬಳಿ ತೆರಳಿದಾಗ ಅವರ ಕೈಯಲ್ಲಿದ್ದ ಕೃಷಿಗೆ ಸಂಬಂಧಿ ಪರಿಕರಗಳು ಕೆರೆ ಪಕ್ಕದಲ್ಲಿ ಬಿದ್ದಿದ್ದು, ಚಪ್ಪಲಿ ನೀರಿನಲ್ಲಿ ತೇಲುತ್ತಿದ್ದುದು ಕಂಡುಬಂದಿದೆ. ಅಕ್ಕ-ಪಕ್ಕ ಹುಡುಕಾಟ ನಡೆಸಿದರೂ, ಅವರ ಪತ್ತೆಯಾಗಿರಲಿಲ್ಲ. ಬಳಿಕ ಕೆರೆಗೆ ಬಿದ್ದಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೆರೆಯಲ್ಲಿ ಶೋಧನೆ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಅವರು ಕೆರೆ ಪಕ್ಕದಲ್ಲಿ ನಡೆದುಕೊಂಡು ಹೋಗುವಾಗ ಹುಲ್ಲಿನ ಮೇಲೆ ಕಾಲಿಟ್ಟಾಗ ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿದ್ದು, ಕೆರೆಗೆ ಬಿದ್ದ ರಭಸದಲ್ಲಿ ಅವರಿಗೆ ಗಾಯಗಳಾಗಿವೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment