Home » ರಂಗಸ್ಥಳದಲ್ಲೇ ಕುಸಿದುಬಿದ್ದು ಕೊನೆಯುಸಿರೆಳೆದ ಕಟೀಲು ಮೇಳದ ಕಲಾವಿದ

ರಂಗಸ್ಥಳದಲ್ಲೇ ಕುಸಿದುಬಿದ್ದು ಕೊನೆಯುಸಿರೆಳೆದ ಕಟೀಲು ಮೇಳದ ಕಲಾವಿದ

0 comments

ಕಟೀಲು: ಗುರುವಾರ ಡಿ. ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದರು.

ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ ತ್ರಿಜನ್ಮ ಮೋಕ್ಷ ಪ್ರಸಂಗ ಸರಸ್ವತೀ ಸದನದಲ್ಲಿ ನಡೆಯುತಿತ್ತು. ಕಲಾವಿದ ಗುರುವಪ್ಪ ಬಾಯಾರು ಅವರು ಶಿಶುಪಾಲನ ಪಾತ್ರ ಮಾಡುತ್ತಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಆ ಸಂದರ್ಭದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಕುಸಿದುಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರ ನಿಧನರಾದರು.

ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಬಾಯಾರು ಅವರಿಗೆ ಅನೇಕ ಕಡೆ ಸಂಮಾನಗಳು ಅವರಿಗೆ ಸಂದಿವೆ.

You may also like

Leave a Comment