Home » ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ನಿಮಗಾಗಿ ಇಲ್ಲಿದೆ ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ನಿಮಗಾಗಿ ಇಲ್ಲಿದೆ ಮಹತ್ವದ ಮಾಹಿತಿ

by Mallika
0 comments

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ದೇಗುಲದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ ಅಂದು ಭಕ್ತರಿಗೆ ಭೋಜನ ಪ್ರಸಾದವೂ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದ್ದು, ಗ್ರಹಣದ ಬಳಿಕ ಶುದ್ದೀಕರಣ ಕಾರ್ಯ ಕೈಗೊಳ್ಳಲಾಗುತ್ತದೆ.

ಬಳಿಕ ಅಂದರೆ ಅಕ್ಟೋಬರ್ 26ರಂದು ಬೆಳಗ್ಗೆ 9 ಗಂಟೆಯಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಲ್ಲದೇ ಸೇವೆಗಳು ಸಹ ಆರಂಭಗೊಳ್ಳಲಿದೆ.

You may also like

Leave a Comment