Home » ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

by ಹೊಸಕನ್ನಡ
0 comments

ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ.

ಅತೀ ವೇಗದಿಂದ ಚಲಿಸುತ್ತಿದ್ದ ಬಸ್ಸು ಎದುರುನಿಂದ ಬರುವ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರ ಸಹಕಾರದಿಂದ ಬಸ್ಸಿನಲ್ಲಿರುವ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸುವ ಕಾರ್ಯಾಚರಣೆ ನಡೆದಿದೆ.

You may also like

Leave a Comment