Home » ಬೆಡ್ ಶೀಟ್ ವ್ಯಾಪಾರಿಗಳಿಗೆ ಹಲ್ಲೆ ಪ್ರಕರಣ : 17 ಮಂದಿ ವಶಕ್ಕೆ

ಬೆಡ್ ಶೀಟ್ ವ್ಯಾಪಾರಿಗಳಿಗೆ ಹಲ್ಲೆ ಪ್ರಕರಣ : 17 ಮಂದಿ ವಶಕ್ಕೆ

by Praveen Chennavara
0 comments

ಕಡಬ : ಇಬ್ಬರು ಬೆಡ್ ಶೀಟ್ ವ್ಯಾಪಾರಿಗಳಿಗೆ ಗುಂಪೊಂದು ಕಾಣಿಯೂರು ಸಮೀಪ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನ ಕುರಿತಂತೆ ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರನ್ನು, ಮನೆಗೆ ನುಗ್ಗಿ ಮಹಿಳೆಯೊಬ್ಬಳನ್ನು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, 50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ ಮೇಲೆ ಬೈಕ್ ಹತ್ತಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

You may also like

Leave a Comment