Home » ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ​ ಮಡಿಕೇರಿ ವಸತಿಗೃಹದಲ್ಲಿ ಆತ್ಮಹತ್ಯೆ!

ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ​ ಮಡಿಕೇರಿ ವಸತಿಗೃಹದಲ್ಲಿ ಆತ್ಮಹತ್ಯೆ!

0 comments

ಮಂಗಳೂರು : ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ಓರ್ವರು ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮಂಗಳೂರು ಬಜ್ಪೆ ಮೂಲದ ಶಿವಾನಂದ್ (45).

ಶಿವಾನಂದ್, ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇವರು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮೃತರ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ, ಆತ್ಮಹತ್ಯೆಗೆ ಕಾರಣ ಏನೆಂಬುದು ತನಿಖೆ ಬಳಿಕ ತಿಳಿದು ಬರಬೇಕಿದೆ.

You may also like

Leave a Comment