Home » ಮೂಡುಬಿದಿರೆ: ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

ಮೂಡುಬಿದಿರೆ: ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

0 comments

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಸಂತೋಷ್ ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ತೀರ್ಥಹಳ್ಳಿ ಗೆ ಹೋಗಿದ್ದ ಅವರು ಇಂದು ಬೆಳಗ್ಗಿನ ಜಾವ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ‌ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.

ಸಂತೋಷ್ ಅವರು 2011 ರ ಬ್ಯಾಚ್ ನಲ್ಲಿ ಪೊಲೀಸ್ ಇಲಾಖೆ ಸೇರಿ 10 ವರ್ಷಗಳ ವೃತ್ತಿ ಜೀವನವನ್ನು ಪೂರೈಸಿದ್ದಾರೆ. ಮೊದಲು ಬರ್ಕೆ ಠಾಣೆಯಲ್ಲಿ 7ವರ್ಷ ಆಮೇಲೆ ಬಜಪೆ 2 ವರ್ಷ ಕರ್ತವ್ಯ ನಿರ್ವಹಿಸಿ, ಕಳೆದ 1ವರ್ಷದಿಂದ ಮೂಡುಬಿದಿರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದರು. ಆದರೆ ಇಂದು ಹೃದಯಾಘಾತದಿಂದ ಅಕಾಲಿಕ ಮರಣಕ್ಕೆ ಈಡಾಗಿದ್ದಾರೆ.

You may also like

Leave a Comment