Home » ಮಂಗಳೂರು: ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ

ಮಂಗಳೂರು: ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ

0 comments

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಂಗಳೂರು ಮೂಲದ ಇಬ್ಬರು ಕೊರೊನಾ ಸೋಂಕಿತರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

ಅವರ ಆರ್ ಪಿಟಿಸಿಆರ್ ಪರೀಕ್ಷೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಡಿದ ಸಂದರ್ಭ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅಲ್ಲಿಯೇ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಅವರ ಗಂಟಲ ದ್ರವ ಮಾದರಿಯನ್ನು ಅಲ್ಲಿಯೇ ಜೆನೋಮಿಕ್ ತಪಾಸಣೆಗೆ ಒಳಪಡಿಸಲಾಗಿತ್ತು.

ಇದೀಗ ಅವರಿಬ್ಬರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

You may also like

Leave a Comment