Home » BIGG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮಂಗಳೂರು ಸೇರಿದಂತೆ ಹಲವೆಡೆ SDPI, PFI ಕಚೇರಿಗಳ ಮೇಲೆ NIA ದಾಳಿ

BIGG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮಂಗಳೂರು ಸೇರಿದಂತೆ ಹಲವೆಡೆ SDPI, PFI ಕಚೇರಿಗಳ ಮೇಲೆ NIA ದಾಳಿ

1 comment

ಮಂಗಳೂರು :ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ, ಪಿಎಫ್ ಐ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಹಾಗೂ ಪಿಎಫ್ ಐ ಕಚೇರಿಗಳ ಮೇಲೆ ಎನ್ ಐಎ ಏಕಕಾಲಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ.

ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ ಜಿಲ್ಲಾ ಕಚೇರಿ ಸೇರಿ ಪಿಎಫ್‌ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮಂಗಳೂರು ಹೊರವಲಯದ ಬಜ್ಪೆ, ಜೋಕಟ್ಟೆ ಸೇರಿದಂತೆ ಕೆಲವೆಡೆ ರಾಜ್ಯ ಪಿಎಫ್‌ಐ ನಾಯಕರ ಮನೆ ಮೇಲೆ ದಾಳಿ ನಡೆಸಿದೆ. ಬಂಟ್ವಾಳ ದಲ್ಲಿ ಪಿಎಫ್ ಐ ರಾಜ್ಯ ನಾಯಕ ತಪೀರ್ ಬೋಳಂತೂರು ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಾಯಕರ ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಮನೆ ಮುಂಭಾಗ ಪಿಎಫ್‌ಐ ಕಾರ್ಯಕರ್ತರು ಜಮಾಯಿಸಿದ್ದು, ಗೋ ಬ್ಯಾಕ್ ಎನ್‌ಐಎ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಿಎಫ್ ಐ ನಾಯಕ ಎ.ಕೆ ಅಶ್ರಫ್ ಅವರ ಮನೆ ಸೇರಿದಂತೆ ಹಲವೆಡೆ ಎನ್ ಐಎ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

You may also like

Leave a Comment