Home » ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ನಡೆಸುವಂತೆ ಎನ್.ಐ.ಎ.ಗೆ ಕೇಂದ್ರ ಗೃಹಸಚಿವಾಲಯ ಸೂಚನೆ

ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ನಡೆಸುವಂತೆ ಎನ್.ಐ.ಎ.ಗೆ ಕೇಂದ್ರ ಗೃಹಸಚಿವಾಲಯ ಸೂಚನೆ

by Praveen Chennavara
0 comments

ನವದೆಹಲಿ : ರಾಜ್ಯಾದ್ಯಂತ ಸಂಚಲನ ಮೂಡಿಸಿದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ.

ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅ .3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಭಾರತ ಸರಕಾರದ ಗೃಹ ಸಚಿವಾಲಯವು ಈ ಅದೇಶವನ್ನು ಹೊರಡಿಸಿದ್ದು, ಅದರ ಪ್ರತಿಯನ್ನು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಡಿಜಿಪಿ ಕರ್ನಾಟಕ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

You may also like

Leave a Comment