Home » Dakshina kannada : ಸಂಪಾಜೆ ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ! ಮಗು ಸೇರಿ ಆರು ಮಂದಿ ಸಾವು!!!

Dakshina kannada : ಸಂಪಾಜೆ ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ! ಮಗು ಸೇರಿ ಆರು ಮಂದಿ ಸಾವು!!!

0 comments
Dakshina kannada

Sampaje Accident: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ (Sampaje Accident)ಬಳಿ ರಾಜ್ಯ ರಸ್ತೆ ಸಾರಿಗೆ ಬಸ್ (KSRTC Bus)ಮತ್ತು ಕಾರೊಂದರ( Car)ನಡುವೆ ನಡೆದ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವುದು ವರದಿಯಾಗಿದೆ.

ಸುಳ್ಯದಿಂದ(Sulia) – (Virajapet )ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಇಂದು (ಎ.14ರ ಶುಕ್ರವಾರ) ಈ ಘಟನೆ ನಡೆದಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವುದು ವರದಿಯಾಗಿದೆ.

8 ಮಂದಿ ಪ್ರಯಾಣಿಸುತ್ತಿದ್ದವರಲ್ಲಿ 6 ಜನರು ಅಸುನೀಗಿದ್ದು, ಈ ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಗಂಡಸು ಮೃತಪಟ್ಟಿರುವುದು ತಿಳಿದುಬಂದಿದೆ. ಈ ಘಟನೆಯಲ್ಲಿ ಮೃತಪಟ್ಟ ಮೃತದೇಹಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಒಬ್ಬ ಪುರುಷ ಮತ್ತು ಮಗುವೊಂದು ಗಂಭೀರ ಗಾಯಗೊಂಡಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಸದ್ಯ, ಗಾಯಗೊಂಡ ಪ್ರಯಾಣಿಕರನ್ನು ಸುಳ್ಯದ ಆಸ್ಪತ್ರೆಗೆ (Hospital)ಒಯ್ಯಲಾಗಿದೆ ಎಂದು ತಿಳಿದು ಬಂದಿದೆ. . ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮೃತರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ.

You may also like

Leave a Comment