Home » ಪುತ್ತೂರು । ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಬಿದ್ದ ವಸತಿ ಶಾಲೆಯ ವಿದ್ಯಾರ್ಥಿ, ಮಂಗಳೂರಿಗೆ ದೌಡು

ಪುತ್ತೂರು । ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಬಿದ್ದ ವಸತಿ ಶಾಲೆಯ ವಿದ್ಯಾರ್ಥಿ, ಮಂಗಳೂರಿಗೆ ದೌಡು

0 comments

ಪುತ್ತೂರು: ಬಾಲಕನೊಬ್ಬ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬೊಳುವಾರಿನಲ್ಲಿ ನಡೆದಿದೆ.

ಬಾಲಕನನ್ನು ಸುದಾನ ವಸತಿಯುತ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಹಾಸ್ ರೈ ಎಂದು ತಿಳಿದು ಬಂದಿದೆ. ಈತ ಮನೋಹರ್ ರೈ ಎಂಬುವವರ ಮಗ.

ಈತ ಬೊಳುವಾರಿನ ಫ್ಲಾಟ್ ಒಂದರಲ್ಲಿ ವಾಸವಾಗಿದ್ದ. ಅದೇ ಫ್ಲಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಆತನನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ಕರೆ ತರಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಬಾಲಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

You may also like

Leave a Comment