1
ಕಾಣಿಯೂರು : ಕಡಬ ತಾಲೂಕಿನ ಎಣ್ಮೂರು ಗ್ರಾಮದ ಕಲ್ಲೇರಿ ಎಂಬಲ್ಲಿ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಾತ ಕಲ್ಲೇರಿ ನಿವಾಸಿ ದಿ.ಬಾಬು ಎಂಬವರ ಪುತ್ರ ಪದ್ಮನಾಭ (24 ವ.) ಎಂದು ಗುರುತಿಸಲಾಗಿದೆ.
ಪದ್ಮನಾಭ ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದು,ಇದರಿಂದ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಸಂಶಯಿಸಲಾಗಿದೆ.
ಈ ಕುರಿತು ಮೃತರ ತಾಯಿ ಸುಶೀಲ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ
